ಮಡಿಕೇರಿ ಏ.21 : ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಈ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಈ ಸಾಲಿನಲ್ಲಿ ಕಾಲೇಜಿನ 194 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 76 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 102 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೃತಿಕ ಬಿ.ಕೆ 585 ಅಂಕ ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸುಮೆರ ಎಂ.ಎಸ್ 580 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
577 ಅಂಕ ಗಳಿಸಿದ ಜಾಸ್ಮಿನ್ ವೇಗಸ್ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 572 ಅಂಕ ಗಳಿಸಿ ಜಾಸ್ಮಿನ್ ಪಿ.ಎ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಶೇ 91 ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ತೋರಿದೆ. ಪರೀಕ್ಷೆ ಎದುರಿಸಿದ 134 ವಿದ್ಯಾರ್ಥಿಗಳಲ್ಲಿ 122 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 14 ವಿದ್ಯಾರ್ಥಿಗಳು ಉತ್ತತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಸಮೀಪದ ಪಾಲಿಬೆಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನ 75 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 88 ರಷ್ಟು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಿಜ್ವಾನ 555 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಮೀಪದ ಪೆರುಂಬಾಡಿಯ ಶಂಶುಲ್ ಪದವಿ ಪೂರ್ವ ಕಾಲೇಜು ವಿಜ್ಞಾನ ಹಾಗೂ ಕಲಾ ವಿಭಾಗದಲ್ಲಿ ಶೇ 100 ರಷ್ಟು ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ 96 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಒಟ್ಟು 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ದ್ವಿತೀಯ ಪಿಯುಸಿಯಲ್ಲಿ ಶೆ.100 ಫಲಿತಾಂಶ ಪಡೆದುಕೊಂಡಿದ್ದು, 31 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಉನ್ನತ ಶ್ರೇಣಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.










