ಮಡಿಕೇರಿ ಏ.22 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2023-24 ನೇ ಸಾಲಿಗೆ ಪ್ರಥಮ ಬಿ.ಎ. ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏ.24 ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು.
ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ಅವರು ತಿಳಿಸಿದ್ದಾರೆ.









