ಮಡಿಕೇರಿ ಏ.21 : ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಏಪ್ರಿಲ್, 24 ರಿಂದ ಮೇ, 02 ರವರೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮೌಲ್ಯಮಾಪನ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿರ್ಬಂಧಿತ ಪ್ರದೇಶದ ಒಳಗೆ ಮೌಲ್ಯಮಾಪನ ಕಾರ್ಯದ ಅಧಿಕಾರಿ/ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*