ಸೋಮವಾರಪೇಟೆ ಏ.22 : ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2023-24 ನೇ ಸಾಲಿಗೆ ಪ್ರಥಮ ಬಿ.ಎ. ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏಪ್ರಿಲ್ 24 ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು.
ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಕಂಪ್ಯೂಟರ್ ಲ್ಯಾಬ್ ಶಿಕ್ಷಣ ತರಬೇತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.95911 63808, 9590433420, 962060276,9480007249 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ ಅವರು ತಿಳಿಸಿದ್ದಾರೆ.









