ಮಡಿಕೇರಿ ಏ.22 : ನಗರದ ಮುನೀಶ್ವರ ಬಡಾವಣೆಯ ಮುನೀಶ್ವರ ದೇವಾಲಯ ಭಕ್ತ ಮಂಡಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ.ಜಗದೀಶ್ ರೈ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಎಂ.ಕೆ.ಕಾವೇರಪ್ಪ, ಕಾರ್ಯದರ್ಶಿಯಾಗಿ ಕೆ.ಆರ್.ಪ್ರಸಾದ್, ಸಹ ಕಾರ್ಯದರ್ಶಿಯಾಗಿ ಚಂದ್ರ, ಗೌರವಾಧ್ಯಕ್ಷರಾಗಿ ಆನಂದ, ಸಲಹೆಗಾರರಾಗಿ ಪಿ.ಟಿ. ಉಣ್ಣಿಕೃಷ್ಣ ಅವರನ್ನು ಆಯ್ಕೆ ಮಾಡಲಾಯಿತು.
ಜಗದೀಶ್ ರೈ ಅವರಿಗೆ ನಿರ್ಗಮಿತ ಅಧ್ಯಕ್ಷ ಪಿ.ಟಿ. ಉಣ್ಣಿಕೃಷ್ಣ ಅಧಿಕಾರ ಹಸ್ತಾಂತರಿಸಿದರು.









