ಮಡಿಕೇರಿ ಏ.22 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಯಿತು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು.
ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸದಾಮುದ್ದಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಎಸ್.ಸಿ.ಘಟಕದ ಅಧ್ಯಲ್ಷ ಮುದ್ದುರಾಜ್, ಟಿ.ಪಿ.ನಾಣಯ್ಯ, ಹಿಂದುಳಿದ ಘಟಕದ ಬ್ಲಾಕ್ ಅಧ್ಯಕ್ಷ ಜಿ.ಸಿ.ಜಗದೀಶ್, ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಿನೇಶ್, ಡಿಸಿಸಿ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಟಿ.ಪಿ.ನಾಣಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಜುಲೆಕಾಬಿ, ಪ್ರಮುಖರಾದ ಪ್ರೇಮ ನಿಂಗಪ್ಪ, ಕವನ್ ಕೊತೋಳಿ, ಕಾರ್ಯಕರ್ತರಾದ ಜಿ.ಆರ್.ರಾಜು, ರೇಣುಕ, ಡೈಸಿ, ಮನೋಜ್, ಕರಣ್, ಪ್ರತಾಪ್, ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.









