ಮಡಿಕೇರಿ ಏ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಬಸವ ಜಯಂತಿ”ಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು.
ಬಸವೇಶ್ವರರು ಎಲ್ಲಾ ಸಮಾಜದವರನ್ನೂ ಅನುಭವ ಮಂಟಪದ ಪ್ರಜಾಪ್ರಭುತ್ವದ ವೇದಿಕೆಗೆ ತಂದು ಅಭಿವ್ಯಕ್ತಿ ಸ್ವಾತಂತ್ರ‍್ಯದ ಚರ್ಚಾ ವೇದಿಕೆಯಾಗಿ ಬೆಳೆಸಿದರು ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ ಅವರು ತಿಳಿಸಿದರು. ಇಡೀ ಶರಣ ಚಳುವಳಿಯ ಮಹಾಚೇತನರಾಗಿ ಬಸವೇಶ್ವರರು 12 ನೇ ಶತಮಾನದಲ್ಲಿ ಬೆಳಕು ಕಂಡಿದರು ಎಂದು ಬಸಪ್ಪ ಅವರು ನುಡಿದರು. ಬಸವಣ್ಣ ಎಂಬ ವ್ಯಕ್ತಿತ್ವದ ಮತ್ತು ಶರಣ ಚಳುವಳಿಯ ಮಹಾನಡೆಯ ಸಂಗಮತ್ವವನ್ನು ಸದಾ ಸ್ಮರಿಸಬೇಕಿದೆ. ಬಸವಣ್ಣ ಅವರು ಮಹಾ ಮಾನವತಾವಾದಿಯಾಗಿ ಕಟ್ಟಿ ಬೆಳೆಸಿದ ಚಳವಳಿ ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದ ಶರಣ ಚಳವಳಿ ಆಗಿದೆ ಎಂದರು. ಕಾಯಕ, ದಾಸೋಹ ಮೂಲಕ ಸಮಾಜದಲ್ಲಿ ಸಮಾನತೆ ತರಲು ಬಸವೇಶ್ವರರು ಶ್ರಮಿಸಿದ್ದಾರೆ ಎಂದು ಬಸಪ್ಪ ಅವರು ನುಡಿದರು. ಬಸವಣ್ಣನವರು ಸಾಮಾನ್ಯರು ಮಾತನಾಡುವ ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿದರು. ಈ ಮೂಲಕ ಜನಸಾಮಾನ್ಯರಿಗೂ ಅವರ ಸಂದೇಶಗಳು ಸುಲಭವಾಗಿ ತಲುಪಿತು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಇತರರು ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*