ಮಡಿಕೇರಿ ಏ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನರ ಪ್ರೀತಿ ನನ್ನ ಗೆಲುವಿಗೆ ಶ್ರೀರಕ್ಷೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೊರೆನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಬಾರಿ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.
ಮಡಿಕೇರಿ ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ, ನನ್ನ ಪರ ಒಲವು ಹೊಂದಿದ್ದಾರೆ. ಇದರಿಂದ ಹತಾಶಗೊಂಡಿರುವ ಪ್ರತಿಸ್ಪರ್ಧಿಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನನ್ನು ಬಹುಮತದಿಂದ ಗೆಲ್ಲಿಸುವ ಭರವಸೆಯನ್ನು ಮಡಿಕೇರಿ ಕ್ಷೇತ್ರದ ಜನ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಹರಪಳ್ಳಿ ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಮತಯಾಚಿಸಿದರು.










