ಮಡಿಕೇರಿ ಏ.24 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 16ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.
ಏ.21 ರಂದು ಸಂಜೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದವಿತರಿಸಲಾಯಿತು.
ಏ.22 ರಂದು ಬೆಳಿಗ್ಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಿತು. ನಂತರ ನೆರದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.








