ಮಡಿಕೇರಿ ಏ.24 : ಕೊಡಗು ಜಿಲ್ಲಾ ಕಾಂಗ್ರೆಸ್ ಚುನಾವಣೆ ವಾರ್ ರೂಂ ಸಂಚಾಲಕರನ್ನಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ನೇಮಕ ಮಾಡಿ, 2023 ರ ವಿಧಾನ ಸಭಾ ಚುನಾವಣೆಯಲ್ಲಿ 208 ಮಡಿಕೇರಿ ವಿಧಾನ ಸಭಾ ಕ್ಷೇತ್ರ ಹಾಗೂ 209 ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪೂರಕವಾದ ಕಾರ್ಯತಂತ್ರಗಳನ್ನು ಅಳವಡಿಸಿ ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲು ಕಾರ್ಯಪ್ರವೃತ್ತರಾಗುವಂತೆ ನೇಮಕಾತಿ ಆದೇಶದಲ್ಲಿ ನಿರ್ದೇಶನ ನೀಡಿದ್ದಾರೆ.