ಬೆಂಗಳೂರು ಏ.24 : ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ, ಜಾತ್ಯತೀತ ಜನತಾದಳದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದರು.
ಜ್ವರದ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಶ್ರೀಗಳು ವಿಶ್ರಾಂತಿ ಪಡೆದು ಶೀಘ್ರ ಗುಣಮುಖರಾಗಿ ಎಂದು ಸಲಹೆ ನೀಡಿದರು.
ಚುನಾವಣೆಯ ಒತ್ತಡ ಇರುವುದರಿಂದ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದÀಲೇ ಪಕ್ಷದ ನಾಯಕರು ಹಾಗೂ ಅಭ್ಯರ್ಥಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.








