ಮಡಿಕೇರಿ ಏ.24 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 2 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸದಸ್ಯ ಹೆಚ್.ಎಸ್.ದೇವರಾಜ್ (ಮಣಿ) ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದ್ದು, ಬೆಳಿಗ್ಗೆ 9.20ಕ್ಕೆ ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಹಗಲು 11.45ಕ್ಕೆ ದೇವಿಯ ರಥೋತ್ಸವವು ದೇವಾಲಯದ ಆವರಣದ ಸುತ್ತಲೂ ನೆರವೇರಲಿದ್ದು, ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಜರುಗಲಿದೆ ಎಂದರು.
ಅಪರಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದ್ದು, ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ರಥ ಎಳೆಯಲು ಪುರುಷರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಜಾತ್ರೆಗಿಂತ ಎಂಟು ದಿನಗಳ ಮೊದಲು ವ್ರತಪಾಲನೆ ಮಾಡಬೇಕು. ಅಲ್ಲದೆ ಆ ದಿನ ದೇವಾಲಯದಲ್ಲಿ ತೀರ್ಥಸ್ನಾನ ಮಾಡಿ ಬಿಳಿಪಂಚೆ ಹಾಗೂ ಕೆಂಪು ಮೇಲು ಹೊದಿಕೆ ಧರಿಸಿವರಿಗೆ ಮಾತ್ರ ರಥ ಎಳೆಯಲು ಅವಕಾಶ ನೀಡಲಾಗವುದೆಂದು ಹೆಚ್.ಎಸ್.ದೇವರಾಜ್ ಹೇಳಿದರು.
ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ಮಾತನಾಡಿ, ಸುಮಾರು 5 ಸಾವಿರ ಭಕ್ತಾಧಿಗಳು ವಾರ್ಷಿಕೋತ್ಸವಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ದೂರದಿಂದ ಬರುವ ಭಕ್ತಾಧಿಗಳಿಗೆ ತಂಗಲು ಸ್ಥಳದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಭಕ್ತರಾದ ಚುಮ್ಮಿ ದೇವಯ್ಯ ಮಾತನಾಡಿ, ಪ್ರತಿವರ್ಷವೂ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸದಸ್ಯ ಕೆ.ಎಂ.ತಾರಾಪ್ರಸಾದ್ ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*