ಮಡಿಕೇರಿ ಏ.24 : ವಿರಾಜಪೇಟೆಯಲ್ಲಿ ಏ.25 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತದ ಗುಂಪು ಪರೀಕ್ಷೆ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು ಜಿಲ್ಲಾಸ್ಪತ್ರೆ ಮತ್ತು ವಿರಾಜಪೇಟೆ ರೋಟರಿ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ, ರೆಡ್‍ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕದ ಸಂಯುಕ್ತಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಪೂರ್ವಹ್ನ 10.30 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ವಿರಾಜಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಹರಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಭಾಪತಿ ರವೀಂದ್ರ ರೈ, ಮಡಿಕೇರಿ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಕರುಂಬಯ್ಯ, ಕೊಡಗು ಯುವ ರೆಡ್‍ಕ್ರಾಸ್ ಘಟಕದ ಅಧ್ಯಕ್ಷ ಎಂ.ಧನಂಜಯ, ವಿರಾಜಪೇಟೆ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ನರಸಿಂಹ ಪಾಲ್ಗೊಳ್ಳಲಿದ್ದು, ವಿರಾಜಪೇಟೆ ಸ.ಪ್ರ,ದ.ಕಾಲೇಜು ಐ.ಕ್ಯೂ.ಎ.ಸಿ.ಸಂಚಾಲಕ ಪಿ.ಎನ್.ನಾಗರಾಜಮೂರ್ತಿ ಉಪಸ್ಥಿತರಿರಲಿದ್ದಾರೆ.









