ಮಡಿಕೇರಿ ಏ.24 : ಜಾತ್ಯಾತೀತ ಜನತಾದಳದ ಜಿಲ್ಲಾ ವಕ್ತಾರ ಸೂದನ ಎಸ್.ಈರಪ್ಪ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಂಘಟನೆಯ ದೌರ್ಬಲ್ಯ, ಗುಂಪುಗಾರಿಕೆ ಹಾಗೂ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಪಕ್ಷಕ್ಕೆ ಮತ್ತು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಇನ್ನು ಮುಂದೆ ಪಕ್ಷಾತೀತವಾಗಿ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯನಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದ್ದಾರೆ.









