ಮಡಿಕೇರಿ ಏ.24 : ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಂತೆ ಏಪ್ರಿಲ್, 26 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ‘ಪ್ರತಿಷ್ಠಾ ವಾರ್ಷಿಕೋತ್ಸವ’ ವನ್ನು ಹಮ್ಮಿಕೊಳ್ಳಲಾಗಿದೆ.
ದೇವಾಲಯದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಸಹಯೋಗದಿಂದ ಶ್ರೀ ಗಣಪತಿ ಹೋಮ ಹಾಗೂ ಕಲಶಾಭಿಷೇಕ ಪೂಜೆಗಳು ದೇವಾಲಯದ ವತಿಯಿಂದ ನಡೆಯಲಿದೆ. ಸಾರ್ವಜನಿಕ ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿ ಪ್ರಸಾದ ಸ್ವೀಕರಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಲ್.ದೇವರಾಜು ಅವರು ಕೋರಿದ್ದಾರೆ.








