ಸೋಮವಾರಪೇಟೆ ಏ.24 : ಭಾರತ ಕಮ್ಯೂನಿಸ್ಟ್ ಪಕ್ಷದ(ಸಿಪಿಐ) ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಎಂ. ಸೋಮಪ್ಪ ಸೋಮವಾರ ಪಟ್ಟಣದಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭ ಮಾತನಾಡಿ, ವಿಧಾನ ಸಭೆಯಲ್ಲಿ ಕಾರ್ಮಿಕರು, ರೈತರು, ವಿದ್ಯಾರ್ಥಿ, ಯುವಜನರು, ಶೋಷಿತರ ಪರವಾಗಿ ಯಾರೂ ಧ್ವನಿ ಎತ್ತುತ್ತಿಲ್ಲ. ಈ ಭಾರಿ ದುಡಿಯುವ ಜನತೆಯ ಪಕ್ಷವಾದ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸ್ವಧಿಸಿರುವ ನನಗೆ ಮತ ನೀಡಿದಲ್ಲಿ ಶೋಷಿತರ ಪರಿವಾಗಿ ಹೋರಾಟ ನಡೆಸಲಾಗುವುದು ಎಂದರು.
ಈ ಸಂದರ್ಭ ಪಕ್ಷದ ರಾಜ್ಯ ಸಮಿತಿ ಕಾರ್ಯದರ್ಶಿ ಬಿ. ಹಮ್ಚದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ. ಸುನಿಲ್, ಸಹಕಾರ್ಯದರ್ಶಿ ರಫೀಕ್, ಆದಿ ದ್ರಾವೀಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಎಚ್.ಎಸ್. ಮಧು, ತಾಲ್ಲೂಕು ಕಾರ್ಯದರ್ಶಿ ಪಿ.ಟಿ. ಸುಂದರ ಮತ್ತಿತರರು ಇದ್ದರು.









