ಮಡಿಕೇರಿ ಏ.24 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸೋಮವಾರಪೇಟೆ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿಂದ ಪ್ರಚಾರ ರಥದೊಂದಿಗೆ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ತೆರಳಿದ ಮುಖಂಡರು ಹಾಗು ಕಾರ್ಯಕರ್ತರು, ಸಾರ್ವಜನಿಕರಲ್ಲಿ ಕಾಂಗ್ರೆಸ್ ಪರ ಮತಯಾಚನೆ ಮಾಡಿದರು.
ಈ ಬಾರಿ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಜನತೆ ಆಶೀರ್ವಾದ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಭ್ಯರ್ಥಿ ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರಾದ ಎಚ್.ಎಸ್. ಚಂದ್ರಮೌಳಿ, ಬಿ.ಬಿ. ಸತೀಶ್, ಮಿಥುನ್ ಹಾನಗಲ್ಲು, ಕೆ.ಎಂ. ಲೋಕೇಶ್, ವಿ.ಎ. ಲಾರೆನ್ಸ್ ಇದ್ದರು.










