ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.