ಮಡಿಕೇರಿ ಏ.25 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಏ.29 ರಂದು ಮಡಿಕೇರಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ವಿಶೇಷ ಪ್ರಚಾರ ಅಭಿಯಾನದ ಮೂಲಕ ರಾಜ್ಯವ್ಯಾಪಿ ರಾಷ್ಟ್ರ ಮತ್ತು ರಾಜ್ಯದ ನಾಯಕರುಗಳು ಮತಯಾಚಿಸಲಿದ್ದಾರೆ ಎಂದು ಬಿಜೆಪಿಯ ಕೊಡಗು ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಕಾಂಗ್ರೆಸ್ ಪಕ್ಷದ ಬೇಜವಾಬ್ದಾರಿ ನಡೆಗಳು ಬಿಜೆಪಿಯ ಗೆಲುವಿಗೆ ಪೂರಕ ವಾತಾವರಣವನ್ನು ಸೃಷ್ಟಿಸಿದೆ ಎಂದರು.
1985 ರ ನಂತರದ ಚುನಾವಣಾ ಇತಿಹಾಸದಲ್ಲಿ ಅಧಿಕಾರದಲ್ಲಿದ್ದ ಪಕ್ಷ ಎರಡನೇ ಬಾರಿಗೆ ಗೆಲುವು ಸಾಧಿಸಿದ ಇತಿಹಾಸವಿಲ್ಲ. ಆದರೆ ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರದÀಲ್ಲಿ 1500 ಕೋಟಿ ರೂ.ಗೂ ಅಧಿಕ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ಕಳೆದ ಮೂರೂವರೆ ವರ್ಷಗಳ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರಾಕೃತಿಕ ವಿಕೋಪದ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಟಿಪ್ಪು ಜಯಂತಿ, ಗೋಹತ್ಯೆ, ಮತಾಂತರ ಮತ್ತು ಪಿಎಫ್‍ಐ ಸಂಘಟನೆಯನ್ನು ನಿಷೇಧಿಸಿದೆ. ಬಿಜೆಪಿ ಸರ್ಕಾರದ ಈ ಕಾನೂನುಗಳನ್ನು ಬದಲಾಯಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿಗಳು ಭ್ರಷ್ಟಾಚಾರವನ್ನು ಟೀಕಿಸುವ ಭರದಲ್ಲಿ ಇಡೀ ಲಿಂಗಾಯಿತ ಸಮುದಾಯವನ್ನೇ ಅವಮಾನಿಸಿದ್ದಾರೆ. ಈ ಬೆಳವಣಿಗೆಗಳು ಬಿಜೆಪಿಯ ಗೆಲುವಿಗೆ ಸಹಕಾರಿಯಾಗಿದೆ ಎಂದರು.
ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂದರ್ಭ ಸಾಮಾಜಿಕ ನ್ಯಾಯವನ್ನು ಮೆರೆದಿದೆ. ಕಟ್ಟ ಕಡೆಯ ವ್ಯಕ್ತಿ, ಸಾಮಾನ್ಯ ಕಾರ್ಯಕರ್ತ ಸೇರಿದಂತೆ 75 ಕ್ಕೂ ಹೆಚ್ಚು ಹೊಸಮುಖಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಪ್ರೀತಿಸುವವರ ಸಂಖ್ಯೆ ದೊಡ್ಡದೇ ಇದೆ. ಹಿಂದುತ್ವ ಮತ್ತು ರಾಷ್ಟ್ರೀಯತೆಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಪ್ರತಾಪ್ ಸಿಂಹ ನಾಯಕ್ ತಿಳಿಸಿದರು.
ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ಜನರ ಬಳಿ ತೆರಳಿದ್ದು, ಬೂತ್ ಗಳನ್ನು ಬಲಗೊಳಿಸಿದೆ. ಇದರ ಪರಿಣಾಮ ದೊಡ್ಡ ಮತಗಳ ಅಂತರದಿಂದ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ರಾಜ್ಯದಲ್ಲಿ 150 ಸ್ಥಾನಗಳು ಬಿಜೆಪಿ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕೋವಿಡ್ ಸವಾಲನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಸರಿಯಾದ ಸಮಯದಲ್ಲಿ ಲಸಿಕೆಗಳನ್ನು ನೀಡಿದ್ದರಿಂದ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಂತು ಎಂದ ಅವರು, ಸಂಕಷ್ಟದ ಸಂದರ್ಭ ಅನುದಾನವನ್ನು ಬಳಸಿಕೊಂಡ ಕಾರಣ ಜಿಲ್ಲೆಯ ಕೆಲವು ರಸ್ತೆಗಳು ಅಭಿವೃದ್ಧಿ ಕಾಣಲಿಲ್ಲ ಎಂದು ಸಮರ್ಥಿಸಿಕೊಂಡರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.29 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಮಡಿಕೇರಿ ಮಂಡಲದ ಅಧ್ಯಕ್ಷ ಕಾಂಗೀರ ಸತೀಶ್ ಹಾಗೂ ಕೇರಳ ಬಿಜೆಪಿ ಪದಾಧಿಕಾರಿ ಜಯಚಂದ್ರನ್ ಉಪಸ್ಥಿತರಿದ್ದರು.
Breaking News
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*