ಮಡಿಕೇರಿ ಏ.25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಶಂಕರಾಚಾರ್ಯರ’ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಲರಾಜ್ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.
ಶ್ರೀ ಶಂಕರಾಚಾರ್ಯರು ವಿದ್ಯೆಗೆ ಹೆಚ್ಚಿನ ಒತ್ತು ನೀಡಿದ್ದರು, ವಿದ್ಯೆಯು ಆತ್ಮಜ್ಞಾನ ನಮ್ಮ ತನದ ಅರಿವೇ ವಿದ್ಯೆ ಆಗಿದೆ ಎಂಬುದನ್ನು ತಿಳಿಸಿದ್ದಾರೆ ಎಂದು ಗಣ್ಯರು ಪ್ರತಿಪಾದಿಸಿದರು.
ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರ ಬಗ್ಗೆ ಪ್ರತಿಪಾದಿಸಿದ್ದಾರೆ. ಜ್ಞಾನವೇ ಆತ್ಮಜ್ಞಾನ, ಬ್ರಹ್ಮಜ್ಞಾನ ಎಂಬುದನ್ನು ಆಚಾರ್ಯರ ಕಾಣಿಕೆಯ ಸಾರವಾಗಿದೆ ಎಂದು ಗಣ್ಯರು ಹೇಳಿದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*