ಮಡಿಕೇರಿ ಏ.25 : ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿನೂತನ ರೀತಿಯಲ್ಲಿ ಆಯೋಜಿಸಿರುವ ಮತದಾರರ ಶಿಕ್ಷಣ, ಅರಿವು ಹಾಗೂ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಶೇಷವಾಗಿ ಸಂಜೆ 7.15 ರಿಂದ 30 ನಿಮಿಷಗಳ ಕಾಲ ಸರಿಗಮಪ ಲಿಟಲ್ ಚಾಂಪ್ ರಿಯಾಲಿಟಿ ಶೋ ನಲ್ಲಿ ಪ್ರಥಮ ಸ್ಥಾನ ಪಡೆದ ಪ್ರಗತಿ ಬಡಿಗೇರ್ ಹಾಗೂ ಅವರ ತಂದೆ ಬಸವರಾಜ ಬಡಿಗೇರ್ ಸಹೋದರಿ ಪ್ರತಿಕ್ಷಾ ಬಡಿಗೇರ್ ಅವರಿಂದ ಹಾಡುಗಾರಿಕೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವದ ಸಂದೇಶವನ್ನು ಎಲ್ಲರಿಗೂ ತಲುಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಕೋರಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*