ಮಡಿಕೇರಿ ಏ.25 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮತದಾನವು ಮೇ, 10 ರಂದು ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಕಲಂ 126 ರಡಿ ವ್ಯಾಖ್ಯಾನಿಸಿದ ಅಂಶಗಳಂತೆ, ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ಮತ್ತು ದಂಡ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) 2005 ರ ಸೆಕ್ಷನ್ 144(ಎ)ರಡಿ ದತ್ತವಾದ ಅಧಿಕಾರದಂತೆ ಮೇ, 08 ರ ಸಂಜೆ 6 ಗಂಟೆಯಿಂದ ಮೇ, 11 ರ ಸಂಜೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ/ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ-ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರೆ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ.
ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು, ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು/ ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ಮತಗಟ್ಟೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ.
ಮತದಾನದ ದಿನವಾದ ಮೇ, 10 ರಂದು ಜಿಲ್ಲೆಯಾದ್ಯಂತ ಎಲ್ಲಾ ಸಂತೆ-ಜಾತ್ರೆಗಳನ್ನು ನಿಷೇಧಿಸಿದೆ. ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ ಹಾಗೂ ಮತಗಟ್ಟೆಗಳ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ/ ಬಂದೂಕುಗಳನ್ನು ಹೊಂದಿರುವುದಕ್ಕೆ ಹಾಗೂ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*