ಮಡಿಕೇರಿ ಏ.25 : ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಪಿ.ಬೋಪಣ್ಣ ಪರ ಬಿರುಸಿನ ಪ್ರಚಾರ ನಡೆಯಿತು.
ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ವಿವಿಧ ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ, ಮಾಜಿ ಅಧ್ಯಕ್ಷ ಎಂ.ಕೆ.ಅಪ್ಪಯ್ಯ, ಪ್ರಮುಖರಾದ ಥೋಮಸ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.









