ಮಡಿಕೇರಿ ಏ.25 : ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ನಿವಾಸಿಗಳು ಏ.27 ರಿಂದ ಅರೆಬೆತ್ತಲೆ ಪ್ರತಿಭಟನೆ ಆರಂಭಿಸಲು ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಳೆದ 30 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಆಡಳಿತ ವ್ಯವಸ್ಥೆ ಯಾವುದೇ ಸ್ಪಂದನೆ ನೀಡದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಹೋರಾಟಗಾರರ ಪರವಾಗಿ ಸ್ಥಳೀಯ ನಿವಾಸಿ ಎಂ.ಎಸ್.ಆನoದ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡ ಮತ್ತಿತರ ದುರ್ಬಲ ವರ್ಗದ 260 ಕುಟುಂಬಗಳು ವಾಸ ಮಾಡುತ್ತಿರುವ ನಿವೇಶನದ ಹಕ್ಕುಪತ್ರದ ಲೋಪದೋಷಗಳನ್ನು ಸರಿಪಡಿಸಬೇಕು ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಗ್ರಾಮದಲ್ಲೇ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಈ ಬೇಡಿಕೆಗಳ ಕುರಿತು ಸೂಕ್ತ ಭರವಸೆ ನೀಡಬೇಕು. ತಪ್ಪಿದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆಯನ್ನು ಕೂಡ ನೀಡಲಾಗಿತ್ತು. ಆದರೆ ಬಡವರ ಹೋರಾಟಕ್ಕೆ ಬೆಲೆ ಇಲ್ಲ ಎಂಬಂತೆ ಇಲ್ಲಿಯವರೆಗೆ ಯಾರೂ ನಮ್ಮನ್ನು ವಿಚಾರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಮಹಿಳೆಯರು, ಪುರುಷರು, ಮಕ್ಕಳಾದಿಯಾಗಿ ಧರಣಿ ನಡೆಸುತ್ತಿದ್ದರೂ ನಮ್ಮ ಮತವೇ ಬೇಡ ಎನ್ನುವ ರೀತಿಯಲ್ಲಿ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೋರಾಟದ ಮುಂದಿನ ಭಾಗವಾಗಿ ಅರೆಬೆತ್ತಲೆ ಪ್ರತಿಭಟನೆಯನ್ನು ಆರಂಭಿಸಲಾಗುತ್ತಿದೆ. ಇದಕ್ಕೂ ಸ್ಪಂದನೆ ದೊರೆಯದಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿರುವುದಾಗಿ ಆನಂದ ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*