ಮಡಿಕೇರಿ ಏ.26 : ಸಂವಿಧಾನ ಬದಲಾಯಿಸಲು ಬಿಜೆಪಿ ಮುಂದಾಗಿದೆ ಎನ್ನುವ ವೃಥಾರೋಪಗಳನ್ನು ಮಾಡಲಾಗುತ್ತಿದೆ. ದೇಶದಲ್ಲಿ ‘ಎಮರ್ಜೆನ್ಸಿ’ ಘೋಷಿಸುವ ಮೂಲಕ ಜನರ ಮೂಲಭೂತ ಹಕ್ಕುಗಳನ್ನು ಕಸಿದು ಸಂವಿಧಾನಕ್ಕೆ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಗುಜರಾತ್ ಶಾಸಕ ಡಾ.ಪ್ರದ್ಯುಮಾನ್ ವಾಜ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗಳನ್ನು ತರಲಾಗುತ್ತದೆಯೇ ಹೊರತು, ಅದನ್ನು ಬದಲಾಯಿಸಲು ಎಂದಿಗೂ ಸಾಧ್ಯವಿಲ್ಲ. ಹೀಗಿದ್ದೂ, ಬಿಜೆಪಿ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್‍ನ ಸುದೀರ್ಘ ಆಡಳಿತದ ಅವಧಿಯಲ್ಲಿ ಸಂವಿಧಾನಕ್ಕೆ 100 ಕ್ಕೂ ಹೆಚ್ಚಿನ ತಿದ್ದುಪಡಿಗಳನ್ನು ತರಲಾಗಿದೆಯೆಂದು ತಿಳಿಸಿದರು.
ಸಂವಿಧಾನ ಬದ್ಧವಾಗಿ ರಚನೆಯಾದ ಸರ್ಕಾರಗಳನ್ನು ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ 30 ಬಾರಿ ವಜಾ ಗೊಳಿಸಿ ಸಂವಿಧಾನದ ಮೂಲ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆಯೆಂದು ಹೇಳಿದ ಅವರು, ಟೀಕಿಸುವ ಭರದಲ್ಲಿ ತೋರು ಬೆರಳು ಮಾತ್ರ ಮುಂದಿರುತ್ತದೆ, ಮೂರು ಬೆರಳುಗಳು ನಿಮ್ಮತ್ತಲೆ ತಿರುಗಿರುತ್ತದೆ ಎನ್ನುವುದನ್ನು ಕಾಂಗ್ರೆಸ್ ಅರಿತುಕೊಳ್ಳಬೇಕೆಂದು ಹೇಳಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಂವಿಧಾನದ 370ನೇ ವಿಧಿಗೆ ತಿದ್ದುಪಡಿಯನ್ನು ತರುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಶೋಷಿತ ಸಮುದಾಯಗಳಿಗೆ ಅವರ ಹಕ್ಕನ್ನು ನೀಡುವ ದೊಡ್ಡ ಕೆಲಸವನ್ನು ನಿರ್ವಹಿಸಿದೆ. ಅಟಲ್ ಬಿಹಾರಿ ಬಾಜಪೇಯಿ ಅವರು ಅಧಿಕಾರದಲ್ಲಿದ್ದ ಸಂದರ್ಭ ಅಡ್ವಾಣಿಯವರೊಂದಿಗೆ ಸೇರಿ ಜ್ಞಾನ ಭಂಡಾರವೆಂದೇ ವಿಶ್ವ ಮಾನ್ಯರಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ‘ಭಾರತ ರತ್ನ’ ಗೌರವವನ್ನು ನೀಡಲಾಯಿತ್ತೆಂದು ಡಾ.ಪ್ರದ್ಯುಮಾನ್ ವಾಜ್ ಸ್ಪಷ್ಡಪಡಿಸಿದರು.
ಕೊಡಗಿನ ಮಡಿಕೇರಿ ಕ್ಷೇತ್ರದಿಂದ 5 ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ 4 ಬಾರಿ ಶಾಸಕರಾಗಿರುವ ಕೆ.ಜಿ.ಬೋಪಯ್ಯ ಅವರು ಜನಮೆಚ್ಚುಗೆಗೆ ಪಾತ್ರವಾಗಿಯೇ ಇಂತಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಬಾರಿಯೂ ಇವರು ಜನಾಶೀರ್ವಾದವನ್ನು ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರೈತ ಮೋರ್ಚಾ ಪ್ರಮುಖರಾದ ಡಾ.ಬಿ.ಸಿ.ನವೀನ್ ಮಾತನಾಡಿ, ಇಂದು ಬೆಳಗ್ಗೆ ಡಾ.ಪ್ರದ್ಯುಮಾನ್ ವಾಜ್ ಅವರು ಮಂಗಳಾದೇವಿನಗರ, ಅಶೋಕಪುರ ಭಾಗಗಳಿಗೆ ಭೇಟಿ ನೀಡಿ ಮತ ಯಾಚಿಸಿದ್ದಾರೆ. ನಗರದ ಫೀ.ಮಾ.ಕಾರ್ಯಪ್ಪ, ಜ.ತಿಮ್ಮಯ್ಯ ಸೇರಿದಂತೆ ವೀರಯೋಧರ ಪ್ರತಿಮೆಗಳಿಗೆ ಗೌರವಾರ್ಪಣೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಹಾಗೂ ಪ್ರಮುಖರಾದ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*