ಮಡಿಕೇರಿ ಏ.26 : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನೀಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
ಬಿ.ಎ.ಪದವಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ, ಬಿ.ಕಾಂ ಪದವಿ ಹಾಗೂ ಬಿಬಿಎ ಪದವಿ ವ್ಯಾಸಂಗಕ್ಕೆ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ತಿಳಿಸಿದ್ದಾರೆ.







