ಮಡಿಕೇರಿ ಏ.27 : ಕಾಲುಜಾರಿ ಬಿದ್ದು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುತ್ತ (70) ಎಂಬವರು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಬೆಳ್ಳೂರು ಗ್ರಾಮದವರೆಂದು ಅಂದಾಜಿಸಲಾಗಿದ್ದು, ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲದಿರುವುದರಿಂದ ಮೃತ ದೇಹವನ್ನು ಮಡಿಕೇರಿ ಆಸ್ಪತ್ರೆಯಲ್ಲಿ ಶೀಥಿಲೀಕರಣದಲ್ಲಿ ಇಡಲಾಗಿದ್ದು, ವಾರಸುದಾರರು ಇದ್ದಲ್ಲಿ ಶ್ರೀಮಂಗಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ಮನವಿ ಮಾಡಿದೆ.