ಮಡಿಕೇರಿ ಏ.27 : ಟಿಪ್ಪು ಮೂರ್ತಿ ಸ್ಥಾಪನೆ ಬಗ್ಗೆ ಮುಸಲ್ಮಾನರಲ್ಲಿ ಭರವಸೆ ಮೂಡಿಸಿ ಕೊಡಗಿನ ಕಾಂಗ್ರೆಸ್ ಅಭ್ಯರ್ಥಿಗಳು ಮತ ಗಳಿಕೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ, ಇಸ್ಲಾಮಿನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಸಂದರ್ಭ ಸಾಧನೆಯ ಆಧಾರದಲ್ಲಿ ಮತಯಾಚನೆ ಮಾಡಬೇಕೆ ಹೊರತು ಭಾವನೆಗಳನ್ನು ಕೆಣಕಬಾರದು ಎಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ವಿದ್ಯಾವಂತರು ಮತ್ತು ಪ್ರಜ್ಞಾವಂತರಾಗಿದ್ದು, ಪ್ರತಿಸ್ಪರ್ಧಿಗಳನ್ನು ಇಲ್ಲಿಯವರೆಗೆ ತೇಜೋವಧೆ ಮಾಡುವ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿಲ್ಲ. ಬದಲಾವಣೆಗಾಗಿ ಮತಯಾಚಿಸುತ್ತಿದ್ದು, ಮತದಾರರು ಕೂಡ ಸೂಕ್ತ ಸ್ಪಂದನೆ ನೀಡುತ್ತಿದ್ದಾರೆ. ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ಗೆಲ್ಲುವುದು ಖಚಿತ ಎನ್ನುವ ಮುನ್ಸೂಚನೆ ದೊರೆತ ಬೆನ್ನಲ್ಲೇ ಅಪ್ರಸ್ತುತ ವಿಚಾರಗಳನ್ನು ಚರ್ಚೆಗೆ ತೆಗೆದುಕೊಂಡು ಮತದಾರರ ಹಾದಿ ತಪ್ಪಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇಸ್ಲಾಮಿನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲದಿದ್ದರೂ ಟಿಪ್ಪು ಮೂರ್ತಿಯ ಕುರಿತು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಸುಳ್ಳು ಹೇಳಿ ಮತ ಸೆಳೆಯುವ ಬದಲು ತಾವುಗಳು ಇಷ್ಟು ವರ್ಷಗಳ ಕಾಲ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮೂಲಕ ಮತ ಪಡೆಯಲಿ ಎಂದು ಒತ್ತಾಯಿಸಿರುವ ಅವರು, ಅಪಪ್ರಚಾರದ ಮೂಲಕ ಭಾವನೆಗಳನ್ನು ಕೆಣಕುವವರ ವಿರುದ್ಧ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಹೊಸ ಚಿಂತನೆ ಮತ್ತು ಅಭಿವೃದ್ಧಿ ಪರ ಉತ್ಸಾಹದೊಂದಿಗೆ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯ ಜನರು ಕೂಡ ಇವರನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದರಿಂದ ಹತಾಶಗೊಂಡಿರುವ ಬಿಜೆಪಿ ಮಂದಿ ಅಭ್ಯರ್ಥಿಗಳನ್ನು ಹೊರಗಿನವರೆಂದು ಪ್ರತಿಬಿಂಬಿಸುತ್ತಿರುವುದು ಖಂಡನೀಯ. ಪೊನ್ನಣ್ಣ ಅವರು ಕೊಡಗಿನ ಮಣ್ಣಿನ ಮಗನಾದರೆ, ಮಂತರ್ ಗೌಡ ಅವರು ಜಿಲ್ಲೆಯ ಅಳಿಯ ಆಗಿದ್ದಾರೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಯಾರು ಯಾವ ಪ್ರದೇಶವನ್ನು ಬೇಕಾದರೂ ಅವಲಂಬಿಸಬಹುದಾಗಿದೆ. ಜನಸೇವೆ ಮಾಡಲು ತಮ್ಮ ಇಚ್ಛೆಯ ಕ್ಷೇತ್ರವನ್ನು ಆಯ್ಕೆ ಮಾಡುವ ಹಕ್ಕನ್ನು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿದೆ.
ಬಿಜೆಪಿಯ ದೊಡ್ಡ ದೊಡ್ಡ ನಾಯಕರೇ ತಮ್ಮದಲ್ಲದ ಕ್ಷೇತ್ರಗಳಲ್ಲಿ ಚುನಾವಣೆಯನ್ನು ಎದುರಿಸಿದ ಅನೇಕ ಉದಾಹರಣೆಗಳಿವೆ. ತಮ್ಮೊಳಗಿನ ಹುಳುಕನ್ನು ಮುಚ್ಚಿಟ್ಟು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಬಿಜೆಪಿಯ ಹತಾಶ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದು ಎಂ.ಎ.ಕಲೀಲ್ ಬಾಷ ಟೀಕಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*