ಮಡಿಕೇರಿ ಏ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಹಾಗೂ ಇತರರು ಹಾಜರಿದ್ದರು.









