ಸೋಮವಾರಪೇಟೆ ಏ.27 : ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಚೌಡ್ಲು ಗ್ರಾಮದ ಜಾನಕಿ ವೆಂಕಟೇಶ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ನೇಮಕ ಮಾಡಿದ್ದಾರೆ. ಜೆಡಿಎಸ್ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಜಾನಕಿ ಅವರು ಹತ್ತು ದಿನದ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.










