ಮಡಿಕೇರಿ ಏ.29 : ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಾಶೀರ್ ಅವರನ್ನು ಸುಂಟ್ಟಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭ ಇಲ್ಲಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಶೀರ್, ಜಿಲ್ಲೆಯ ವಿವಿಧ ಭಾಗಗಳಿಗೆ ಈಗಾಗಲೇ ಭೇಟಿ ನೀಡಿದ್ದೇನೆ. ಜೆಡಿಎಸ್ ಪಕ್ಷದ ಪರವಾದ ಒಲವು ವ್ಯಕ್ತವಾಗುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕೊಡಗು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನರು ಸ್ಮರಿಸುತ್ತಿದ್ದಾರೆ ಎಂದು ಹೇಳಿದರು. ಸುಂಟ್ಟಿಕೊಪ್ಪ ಜೆಡಿಎಸ್ ಯುವ ಮುಖಂಡರಾದ ಜೆಡಿಎಸ್ ಯುವ ಘಟಕದ ವಕ್ತಾರ ಜಿನಾಸುದ್ದೀನ್, ಮುಬಶ್ಶೀರ್, ರಂಶೀದ್, ಅಬ್ಬಾಸ್, ಉಸೈನ್ ಹಾಗೂ ಷರೀಫ್ ಇದ್ದರು.