ಮಡಿಕೇರಿ ಏ.28 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜನ್ನು ಕೊಡಗು ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆ ಇದೆ ಎಂದು ನೂತನ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ಅಶೋಕ ಸಂಗಪ್ಪ ಆಲೂರ್ ತಿಳಿಸಿದ್ದಾರೆ.
ಫೀ.ಮಾ.ಕಾರ್ಯಪ್ಪ ಕಾಲೇಜ್ ಗೆ ಭೇಟಿ ನೀಡಿದ ಅವರು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ಮುಂದಿನ ವರ್ಷ ಕಾಲೇಜು ಅಮೃತ ಮಹೋತ್ಸವ ಆಚರಿಸುವ ಸುಸಂದರ್ಭದಲ್ಲಿ ನೂತನ ಶೈಕ್ಷಣಿಕ ಸಂಕೀರ್ಣವನ್ನು ನಿರ್ಮಿಸುವುದು ಮತ್ತು ಇರುವ ಕಟ್ಟಡಗಳನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊಡಗು ವಿಶ್ವವಿದ್ಯಾನಿಲಯ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮುಂಚೂಣಿ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಸ್ಥಾನಗಳಿಸುವಂತಾಗಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಪ್ರಯತ್ನಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಕರೆ ನೀಡಿದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಇದಕ್ಕೂ ಮೊದಲು ಕುಲಪತಿಗಳಾದ ಡಾ.ಅಶೋಕ ಸಂಗಪ್ಪ ಆಲೂರ್, ಅವರು ಪ್ರಚಲಿತದಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸೌಲಭ್ಯಗಳ ಕುರಿತು ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತರಗತಿ ಪ್ರತಿನಿಧಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಇಸಿಸಿಸಿ, ಕ್ರೀಡೆ ಹಾಗೂ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳೊoದಿಗೆ ಚರ್ಚಿಸಿದರು.
ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಕಾಲೇಜ್ ನ ಇತಿಹಾಸ, ದೃಷ್ಟಿಕೋನ, ಸಾಧನೆ ಮತ್ತು ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭ ನೂತನ ಕುಲಪತಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಪರೀಕ್ಷಾಂಗ ಕುಲಸಚಿವರಾದ ಡಾ.ಸೀನಪ್ಪ ಹಾಗೂ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ.ಕೆ.ಕೆ.ಧರ್ಮಪ್ಪ ಉಪಸ್ಥಿತರಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಹೆಚ್.ಆರ್.ರಮೇಶ್ ಕುಲಪತಿಯವರನ್ನು ಪರಿಚಯಿಸಿದರು. ಕೊಡವ ಸ್ನಾತಕೋತ್ತರ ವಿಭಾಗದ ಸಂಯೋಜಕ ಎಂ.ಎನ್.ರವಿಶಂಕರ್ ಅವರು ವಂದಿಸಿದರು. ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ಸಂಯೋಜಕರಾದ ಕೆ.ಎಂ.ಪೂಣಚ್ಚ ನಿರೂಪಿಸಿದರು.
ನಂತರ ಸಂಜೆ ಕುಲಪತಿಗಳಾದ ಡಾ.ಅಶೋಕ ಸಂಗಪ್ಪ ಆಲೂರ್, ಪರೀಕ್ಷಾಂಗ ಕುಲಸಚಿವರಾದ ಡಾ.ಸೀನಪ್ಪ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ.ಕೆ.ಕೆ.ಧರ್ಮಪ್ಪ ಹಾಗೂ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ ಅವರನ್ನು ಭೇಟಿಯಾಗಿ ಸನ್ಮಾನಿಸಿ ಉಭಯಕುಶಲೋಪರಿ ವಿಚಾರಿಸಿದರು. ಕೊಡಗಿನ ಶೈಕ್ಷಣಿಕ ಕ್ಷೇತ್ರದ ಉನ್ನತೀರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಲೋಚನೆ ನಡೆಸಿ ಸಲಹೆಗಳನ್ನು ಪಡೆದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*