ಮಡಿಕೇರಿ ಏ.28 : ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಸಖಿ, ಸಾಂಪ್ರದಾಯಿಕ, ವಿಶೇಷಚೇತನ ಸ್ನೇಹಿ ಮತ್ತು ಯುವ ವೋಟರ್ಸ್ ಒಳಗೊಂಡ ಮತಗಟ್ಟೆಗಳನ್ನು ಗುರುತಿಸಿ ಮತದಾರರನ್ನು ಮತದಾನಕ್ಕೆ ಆಕರ್ಷಿಸಲು ಮುಂದಾಗಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಸಖಿ ಮತಗಟ್ಟೆ ಕೇಂದ್ರಗಳ ವಿವರ ಇಂತಿದೆ : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ನಗರದ ಮಹದೇವಪೇಟೆಯ ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಶಿರಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಳ್ಳುಸೋಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆಯ ಎಸ್‍ಜೆಎಂ ಬಾಲಕಿಯರ ಪ್ರೌಢಶಾಲೆ, ಮಡಿಕೇರಿಯ ಎಫ್‍ಎಂಕೆಎಂಸಿ ಕಾಲೇಜು.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತಿತಿಮತಿಯ ಗ್ರಾ.ಪಂ.ಕಚೇರಿ, ವಿರಾಜಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪೊನ್ನಂಪೇಟೆಯ ಸರ್ಕಾರಿ ಜೂನಿಯರ್ ಕಾಲೇಜು, ಗೋಣಿಕೊಪ್ಪದ ಮಹಿಳಾ ಸಮಾಜ ಕಟ್ಟಡ ಮತ್ತು ವಿರಾಜಪೇಟೆಯ ಜಯಪ್ರಕಾಶ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸಖಿ ಮತಗಟ್ಟೆಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷಚೇತನ ಸ್ನೇಹಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿಯ ಸಂತ ಮೈಕಲರ ಶಾಲೆ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿರಾಜಪೇಟೆ ಸೆಂಟ್ ಆನ್ಸ್‍ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಯುವ ಮತದಾರರ ಮತಗಟ್ಟೆಯನ್ನು ಸ್ಥಾಪಿಸಲಾಗುತ್ತಿದ್ದು, ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಹಿರಿಯ ಪ್ರಾಥಮಿಕ ಶಾಲೆ.
ಥೀಮ್ ಬೇಸ್‍ಡ್ ಮತಗಟ್ಟೆಯನ್ನು ಮಡಿಕೇರಿಯ ಹಿಲ್ ರಸ್ತೆಯಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ, ರಂಗ ಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪೊನ್ನಂಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ.
ಹಾಗೆಯೇ ಸಾಂಪ್ರದಾಯಿಕ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ನಾಗರಹೊಳೆಯ ಸರ್ಕಾರಿ ಆಶ್ರಮ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಹೇಳಿದ್ದಾರೆ.