ಮಡಿಕೇರಿ ಏ.28 : ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ಏಪ್ರಿಲ್, 30 ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ 103 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮ ಪಂಚಾಯತಿಯ 1 ಮತಗಟ್ಟೆಯಲ್ಲಿ ಏಪ್ರಿಲ್, 30 ರಂದು ಬೆಳಗ್ಗೆ 8 ಗಂಟೆಗೆ ‘ಧ್ವಜಾರೋಹಣ’ ನೆರವೇರಿಸಲು ಕ್ರಮವಹಿಸಲಾಗುತ್ತದೆ ಎಂದರು.
ಧ್ವಜಾರೋಹಣ ನೆರವೇರಿಸುವ ಸ್ಥಳವನ್ನು ರಂಗೋಲಿಯಿಂದ ಹಾಗೂ ಇತರೆ ಕ್ರಮಗಳನ್ನು ವಹಿಸಿ ಅಲಂಕರಿಸುವುದು (ಮತದಾರರ ಜಾಗೃತಿಯ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಬಹುದು). ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ ಅಥವಾ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿ.ಪಂ.ಸಿಇಒ ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಬಿಎಲ್‍ಒ, ಪಂಚಾಯತಿ ಸಿಬ್ಬಂದಿಗಳು, ಪಂಚಾಯತಿ ವ್ಯಾಪ್ತಿಯ ಇತರೆ ಇಲಾಖೆಗಳ ಸಿಬ್ಬಂದಿಗಳು, ಸಾರ್ವಜನಿಕರು, ಯುವ ಮತದಾರರು, ವಿಶೇಷಚೇತನ ಮತದಾರರು, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭಾರತ ಚುನಾವಣಾ ಆಯೋಗ ಈ ವರ್ಷ ಬಿಡುಗಡೆ ಮಾಡಿರುವ ಚುನಾವಣಾ ಗೀತೆಯನ್ನು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ 2018 ರಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಗೀತೆಗಳನ್ನು ಬಳಸಲಾಗುತ್ತದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
Breaking News
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*