ಮಡಿಕೇರಿ ಏ.28 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ದಾಖಲಿಸುವುದಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮತಯಾಚಿಸಿದ ಅವರು ಜನರ ಸಂಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದು, ನನ್ನ ಆಯ್ಕೆಯನ್ನು ಎದುರು ನೋಡುತ್ತಿದ್ದಾರೆ. ಇದರಿಂದ ಪ್ರತಿಸ್ಪರ್ಧಿಗಳು ಹತಾಶೆಗೊಂಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಮತ್ತು ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತಯಾಚಿಸಿದರು.