ಮಡಿಕೇರಿ ಏ.29 : ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್ನಾಷನಲ್ ಪಿಯು ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ.
ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ನಾಲ್ಕು ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾಲೇಜಿಗೆ ವಾಣಿಜ್ಯ ವಿಭಾಗದ ಅಫೀಫ ಪಿ.ಎ 566 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ.ವಾಣಿಜ್ಯ ವಿಭಾಗದ ಎಂ.ಎಂ.ಸುಹಾನ 588 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ಆಯಿಶಾ ಕೆ.ವೈ.ಮೊಹಸ್ಸೀನ ವಾಣಿಜ್ಯ ವಿಭಾಗದಲ್ಲಿ 532 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾಳೆ. ಆಯಿಶತ್ತು ಮುಬ್ಶೀನ ವಿಜ್ಞಾನ ವಿಭಾಗದಲ್ಲಿ 523 ಅಂಕಗಳನ್ನು ಪಡೆದು ಕಾಲೇಜಿಗೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









