ಮಡಿಕೇರಿ ಏ.29 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ, ಕುಶಾಲನಗರ ತಾಲ್ಲೂಕು ದೂ.ಸಂ.6361802037, ತಾಲ್ಲೂಕು ವಿಸ್ತರಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.9972171266 ಹಾಗೂ ಮಾಹಿತಿ ಕೇಂದ್ರ ಮಡಿಕೇರಿ 9972799091, ಸೋಮವಾರಪೇಟೆ 8548068519 ಮತ್ತು ವಿರಾಜಪೇಟೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.









