ಮಡಿಕೇರಿ ಏ.29 : ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಇಂದೂಧರ ಹೊನ್ನಾಪುರ, ಸದಾ ಸಮಾನತೆ, ಸಾಮರಸ್ಯವನ್ನೇ ಬಯಸುವ ದಸಂಸ, ದೇಶ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಸರ್ವಾಧಿಕಾರಿ, ಜನವಿರೋಧಿ ಆಡಳಿತವನ್ನು ಕಿತ್ತೊಗೆಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಗುಂಪುಗಳಾಗಿ ಹಂಚಿಹೋಗಿದ್ದ ಸಮಾನ ಮನಸ್ಕ ದಲಿತ ಸಂಘರ್ಷ ಸಮಿತಿಗಳ ಹತ್ತು ಬಣಗಳನ್ನು ಒಂದುಗೂಡಿಸುವ ಮೂಲಕ ಬೆಂಗಳೂರಿನಲ್ಲಿ ನಡೆದ ಡಾ.ಬಿ.ಆರ್.ಅಂಬೇಸ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡಲು ನಿರ್ಧರಿಸಿದೆ ಎಂದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ನೀಡಬೇಕಾದ ಕಲ್ಯಾಣ ಕಾರ್ಯಕ್ರಮ ಮತ್ತು ಹಲವು ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಕಾರ್ಪೋರೇಟ್‍ಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಆಶಯಗಳ ವಿರುದ್ಧವಾಗಿ ಜನವಿರೋಧಿ ಆಡಳಿತ ನಡೆಸುತ್ತಿದೆ. ಭಾರತ ವೈವಿಧ್ಯಮಯವಾದ ಸೌಹಾರ್ಧಯುತ ಮತ್ತು ಬಹುತ್ವ ಸಂಸ್ಕೃತಿಯ ನೆಲೆಬೀಡು. ಇಂತಹ ದೇಶದ ಮೇಲೆ ತಾರಮ್ಯಭರಿತ ಏಕ ಸಂಸ್ಕೃತಿಯನ್ನು ಹೇರುತ್ತ ದಬ್ಬಾಳಿಕೆಯ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.
ದೇಶದ ಸರ್ವಜನರು ಒಂದಾಗಿ ಸಾಮರಸ್ಯ ಮತ್ತು ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದರು.
ದಲಿತರು, ಮಹಿಳೆಯರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಸಿಕೊಂಡು ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‍ಗೆ ಬೆಂಬಲ ಸೂಚಿಸುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದಿರುವುದಾಗಿ ಇಂದೂಧರ ಹೊನ್ನಾಪುರ ತಿಳಿಸಿದರು.
ರಾಜ್ಯ ಸಮಿತಿ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಘೋಷಿಸಿ ದಲಿತರನ್ನು ವಂಚಿಸಿದೆ, ಮುಸ್ಲಿಮರ ಮೀಸಲಾತಿಯನ್ನು ಹಿಂಪಡೆದಿರುವುದು ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿದರು.
ದಮನಿತ, ಶೋಶಿತ, ಹಿಂದುಳಿದ ಸಮಾಜ ಒಗ್ಗೂಡಬೇಕು ಮತ್ತು ಸಂವಿಧಾನದ ಹಕ್ಕುಗಳನ್ನು ಕಾಪಾಡಲು ಕಾಂಗ್ರೆಸ್‍ಗೆ ಬೆಂಬಲ ಸೂಚಿಸಬೇಕು ಎಂದರು.
ಸದಸ್ಯ ಎಂ.ಸೋಮಶೇಖರ್ ಮಾತನಾಡಿ, ಸಮಿತಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದು, ನಾಲ್ಕು ವಿಭಾಗಕ್ಕೆ ನಾಲ್ಕು ತಂಡಗಳನ್ನು ರಚಿಸಿ ಕಾಂಗ್ರೆಸ್ ಪರ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ಜೀವನಳ್ಳಿ ವೆಂಕಟೇಶ್, ಜಿಗಣಿ ಶಂಕರ್ ಹಾಗೂ ವಿ.ನಾಗರಾಜ್ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*