ಮಡಿಕೇರಿ ಏ.29 : ನಮೂನೆ 12 ಡಿ ರಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಹಕ್ಕು ಚಲಾಯಿಸುವ ಪ್ರಕ್ರಿಯೆಗೆ ಶನಿವಾರ ಚಾಲನೆ ದೊರೆಯಿತು.
ಕೊಡಗು ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ-106 ರ ಹುದುಗೂರು ಮತಗಟ್ಟೆ ವ್ಯಾಪ್ತಿಯಲ್ಲಿ ನಾಲ್ಕು ಜನ ಹಿರಿಯ ನಾಗರಿಕರು, ಮತಗಟ್ಟೆ ಸಂಖ್ಯೆ 151 ರ ಹುಲುಗುಂದ ಮತಗಟ್ಟೆಯಲ್ಲಿ ನಾಲ್ಕು ಮಂದಿ ಹಿರಿಯ ನಾಗರಿಕರು, ಒಬ್ಬರು ವಿಶೇಷ ಚೇತನರು, ಹಾಗೆಯೇ ಮತಗಟ್ಟೆ ಸಂಖ್ಯೆ 152 ರ ಚಿಕ್ಕತ್ತೂರಿನಲ್ಲಿ ಹಿರಿಯ ನಾಗರಿಕರು, ಮತಗಟ್ಟೆ 154 ರ ಸುಂದರ ನಗರದಲ್ಲಿ ಒಬ್ಬ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ಮೊದಲ ದಿನ 10 ಮಂದಿ ಮತಹಕ್ಕು ಚಲಾಯಿಸಿದ್ದಾರೆ ಎಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸೆಕ್ಟರ್ ಅಧಿಕಾರಿ ಪುಟ್ಟಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.
ಮಡಿಕೇರಿ ನಗರದ ವಿವಿಧ ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ಹೆಸರು ನೋಂದಾಯಿಸಿರುವ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಮತ ಹಕ್ಕು ಚಲಾಯಿಸಿದ್ದಾರೆ. ಈ ಪ್ರಕ್ರಿಯೆಯು ಮೇ, 6 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 2,474 ಮಂದಿ ಅಂಚೆ ಮತಪತ್ರದ ಮೂಲಕ ಮತಹಕ್ಕು ಚಲಾಯಿಸಲು ಮುಂದಾಗಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*