ಮಡಿಕೇರಿ ಏ.30 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ “ಮಡಿಕೇರಿಯಲ್ಲಿ ಉತ್ಕರ್ಷ 2023” ರ ಶೀರ್ಷಿಕೆಯಡಿ ಕಾಲೇಜು ವಾರ್ಷಿಕೋತ್ಸವ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಪ್ರಕೃತಿ ಸೌಂದರ್ಯದ ಕೊಡಗು ಜಿಲ್ಲೆಯಲ್ಲಿ ಶೈಕ್ಷಣಿಕ ಸಾಧನೆ ಮಾಡುತ್ತಿರುವುದು ಶ್ಲಾಘನೀಯವೆಂದರು.
ಭಾರತದಲ್ಲಿ ಸ್ನಾತಕೊತ್ತರ ಸೀಟುಗಳ ಸಂಖ್ಯೆ ಹೆಚ್ಚಾಗುತಿದ್ದು, ಸಂಸ್ಥೆಯ ಕೊಡುಗೆ ಹೆಚ್ಚಾಗಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಕೆ.ಬಿ.ಕಾರ್ಯಪ್ಪ ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಇದೆ. ಕ್ರಿಟಿಕಲ್ ಕೇರ್ ಆಸ್ಪತ್ರೆ, ನೂತನ ಸಿಟಿ ಸ್ಕಾö್ಯನ್ ಉಪಕರಣ ಸೇರಿದಂತೆ ಸಂಸ್ಥೆಗೆ ಅಗತ್ಯವಿರುವೆಲ್ಲಾ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ಪ್ರಧಾನ ಕಾರ್ಯದರ್ಶಿಗಳು ಕಾಳಜಿ ತೋರಿದ್ದಾರೆ ಎಂದರು.
::: ಸನ್ಮಾನ :::
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರನ್ನು ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್, ಜಿಲ್ಲಾ ಆರೋಗ್ಯಧಿಕಾರಿ ಡಾ ಸತೀಶ್, ವೈದ್ಯಕೀಯ ಅಧೀಕ್ಷಕ ರೂಪೇಶ್ ಗೋಪಾಲ್, ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಆರ್ಥಿಕ ಸಲಹೆಗಾರರಾದ ಆನಂದ ಕೆ, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ಸತೀಶ್ ವಿ.ಎಸ್ ಉಪಸ್ಥಿತರಿದ್ದರು.
ಎಂಬಿಬಿಎಸ್ ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಗಮನ ಸೆಳೆಯಿತು.
::: ಸಭೆ :::
ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರು ಭೋದಕ ಆಸ್ಪತ್ರೆ ಮತ್ತು ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ವೈದ್ಯರುಗಳೊಂದಿಗೆ ಸಭೆ ನಡೆಸಿದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*