ಮಡಿಕೇರಿ ಏ.30 : ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಸೋಲುವ ಭೀತಿಯನ್ನು ಎದುರಿಸುತ್ತಿರುವ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಮತಗಳನ್ನು ವಿಭಜಿಸುವ ಷಡ್ಯಂತ್ರದಲ್ಲಿ ತೊಡಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎನ್ನುವ ಮಾಹಿತಿ ಅರಿತಿರುವ ಪ್ರತಿಸ್ಪರ್ಧಿಗಳು ಹತಾಶ ಮನೋಭಾವದಿಂದ ಕಾಂಗ್ರೆಸ್ ಮತಗಳು ಹಂಚಿ ಹೋಗುವಂತೆ ಕಾರ್ಯತಂತ್ರ ರೂಪಿಸಿದ್ದಾರೆ. ಈ ಕುತಂತ್ರಗಳ ಬಗ್ಗೆ ಮತದಾರರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ಸೋಲುವ ಅಭ್ಯರ್ಥಿಗಳನ್ನು ಬೆಂಬಲಿಸಿ ಮತಗಳನ್ನು ಹಾಳು ಮಾಡಿಕೊಳ್ಳದೆ ಜನಪರ ಮತ್ತು ಅಭಿವೃದ್ಧಿಪರ ಚಿಂತನೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು. ಮತಗಳು ಹಂಚಿ ಹೋಗದಂತೆ ನೋಡಿಕೊಳ್ಳಬೇಕು. ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳಿಂದ ಮತ್ತು ಮೂಲಭೂತ ಸೌಲಭ್ಯಗಳಿಂದ ಕೊಡಗು ವಂಚಿತವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಜಿಲ್ಲೆಯ ಮತದಾರರು ಜಾಗೃತರಾಗದಿದ್ದಲ್ಲಿ ಮತ್ತೆ ಐದು ವರ್ಷಗಳ ಕಾಲ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ.
ಭಾವನೆಗಳನ್ನು ಕೆಣಕುವ ಅಭ್ಯರ್ಥಿಗಳನ್ನು ಸೋಲಿಸಿ ಅಭಿವೃದ್ಧಿಗಾಗಿ ಹೊಸ ಚಿಂತನೆಯೊoದಿಗೆ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಯಾವುದೇ ಒತ್ತಡ, ಆಮಿಷ ಮತ್ತು ಆತಂಕಕ್ಕೆ ಒಳಗಾಗದೆ ಸ್ವಯಂ ಇಚ್ಛೆಯಿಂದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರತಿಸ್ಪರ್ಧಿಗಳ ಇಲ್ಲಸಲ್ಲದ ಆರೋಪ ಮತ್ತು ಅಪಪ್ರಚಾರಗಳು ಮತ ವಿಭಜನೆಯ ತಂತ್ರಗಾರಿಕೆಯ ಒಂದು ಭಾಗವಾಗಿದೆ. ಚುನಾವಣೆಗಳು ಬಂದಾಗಲೆಲ್ಲ ಕ್ಷುಲ್ಲಕ ವಿಚಾರಗಳನ್ನು ಚಲಾವಣೆಗೆ ತಂದು ಆತಂಕ ಮೂಡಿಸಿ ಮತಗಳಿಸುವ ಕೀಳುಮಟ್ಟದ ರಾಜಕಾರಣದ ಬಗ್ಗೆ ಜಿಲ್ಲೆಯ ಜನ ಜಾಗೃತರಾಗಿದ್ದಾರೆ. ಭಾವನೆಗಳೊಂದಿಗೆ ಚೆಲ್ಲಾಟವಾಡುವ ವ್ಯಕ್ತಿಗಳ ಬದಲಿಗೆ ಅಭಿವೃದ್ಧಿಗಾಗಿ ಹವಣಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತದಾರರು ಒಲವು ತೋರುತ್ತಿದ್ದಾರೆ. ವಿರಾಜಪೇಟೆಯ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿಯ ಡಾ.ಮಂತರ್ ಗೌಡ ಅವರ ಗೆಲುವು ನಿಶ್ಚತವಾಗಿದೆ ಎಂದು ಉಸ್ಮಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*