ಮಡಿಕೇರಿ ಏ.30 : ಕಳೆದ 25 ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶಾಸಕರುಗಳು ಜನಪರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ವಹಿಸದೆ ಇರುವುದರಿಂದ ಈ ಬಾರಿ ಮತದಾರರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಅವರು ನಡೆಸಿದ ರೋಡ್ ಶೋಗೆ ಸೂಕ್ತ ಸ್ಪಂದನೆ ದೊರೆಯದೆ ನೀರಸವಾಗಿತ್ತು ಎಂದು ಟೀಕಿಸಿದ್ದಾರೆೆ
ವಿಜಯ ಸಂಕಲ್ಪ ಯಾತ್ರೆ ವಿಫಲವಾಗಿದ್ದು, 60 ಸ್ಥಾನಗಳನ್ನು ಗೆಲ್ಲಲಾಗದ ಪರಿಸ್ಥಿತಿಯಲ್ಲಿ ಬಿಜೆಪಿ ಇದೆ. ಕೊಡಗಿನಲ್ಲಿ ಶಾಸಕರುಗಳ ನಿರ್ಲಕ್ಷ್ಯ ಮನೋಭಾವಕ್ಕೆ ಜನ ತಕ್ಕ ಉತ್ತರ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲಿದ್ದಾರೆ ಎಂದರು.
ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಅವರನ್ನು ಹೊರಗಿನ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದೆ. ಪೊನ್ನಣ್ಣ ಹುದಿಕೇರಿಯವರಾಗಿದ್ದು, ಕ್ಷೇತ್ರದ ನಿವಾಸಿಯಾಗಿದ್ದಾರೆ. ಈಗಿರುವ ಶಾಸಕರಿಗೆ ವಿರಾಜಪೇಟೆ ಕ್ಷೇತ್ರದಲ್ಲಿ ಕನಿಷ್ಟ ಬಾಡಿಗೆ ಮನೆಯೂ ಇಲ್ಲ. ಅವರು ಮಡಿಕೇರಿ ಕ್ಷೇತ್ರದ ಕಾಲೂರು ಗ್ರಾಮದವರಾಗಿದ್ದು, ಅವರೇ ಹೊರಗಿನ ಅಭ್ಯರ್ಥಿಯಾಗಿದ್ದಾರೆ. ಪೊನ್ನಣ್ಣ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ಸಂಕೇತ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಸಭೆಯ ಮಾಜಿ ಸದಸ್ಯೆ ಪ್ರೇಮಾ ಕಾರ್ಯಪ್ಪ ಮಾತನಾಡಿ ಈಗಾಗಲೇ ಮುಗಿದು ಹೋಗಿರುವ ಅಧ್ಯಾಯವಾಗಿರುವ ಟಿಪ್ಪು ಜಯಂತಿಯನ್ನು ಚುನಾವಣೆ ಸಂದರ್ಭ ಪ್ರಸ್ತಾಪಿಸಲಾಗುತ್ತಿದೆ. ಟಿಪ್ಪು ಜಯಂತಿ ರದ್ದಾಗಿ 3 ವರ್ಷಗಳೇ ಕಳೆದಿದ್ದರೂ ಅಭಿವೃದ್ಧಿ ವಿಚಾರವನ್ನು ಮರೆತು ಭಾವನೆಗಳನ್ನು ಕೆಣಕಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ರಸ್ತೆ, ಕುಡಿಯುವ ನೀರು, ಉದ್ಯೋಗ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದಾಗಿದೆ. ಈ ಬಗ್ಗೆ ಶಾಸಕರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂದು ಸಮರ್ಥಿಸಿಕೊಂಡರು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ ಕಳೆದ 20 ವರ್ಷಗಳಿಂದ ವಿರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಯಾವುದೇ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಟೀಕಿಸಿದರು.
ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪೂರಕವಾದ ವಾತಾವರಣವಿದೆ. ಆಡಳಿತ ಪಕ್ಷದ ವೈಫಲ್ಯಗಳು ಹಾಗೂ ದೌರ್ಬಲ್ಯಗಳೇ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಪ್ರಬಲವಾಗಲು ಕಾರಣ ಎಂದು ಹೇಳಿದರು. ಜಮ್ಮಾ ಬಾಣೆ, ಕಂದಾಯ, ಪರಿಶಿಷ್ಟ ಕಾಲೋನಿಗಳ ಸಮಸ್ಯೆಗಳನ್ನು ಪರಿಹರಿಸುವ ಚಿಂತನೆಗಳನ್ನು ಈಗಿನ ಶಾಸಕರು ಮಾಡಿಲ್ಲ ಎಂದು ಅರುಣ್ ಮಾಚಯ್ಯ ಆರೋಪಿಸಿದರು.
ಕಾಂಗ್ರೆಸ್ ಪ್ರಮುಖರಾದ ಕೆ.ಬಿ.ಶಾಂತಪ್ಪ, ಹೆಚ್.ಎಂ.ನಂದಕುಮಾರ್ ಹಾಗೂ ಎಂ.ಎ.ಮೊಹಮ್ಮದ್ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*