ಮಡಿಕೇರಿ ಮೇ 1 : ನಮೂನೆ 12 ಡಿ ರಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಹಕ್ಕು ಚಲಾಯಿಸುವ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಸೆಂಟ್ ಜೋಸೆಫ್ ಕಾಲೇಜಿನ ಬಳಿ ಇರುವ 98 ವರ್ಷದ ಲಕ್ಷ್ಮಿನಾರಾಯಣ ಅವರ ಮನೆಗೆ ಭೇಟಿ ನೀಡಿ, ಅಂಚೆ ಮತಪತ್ರದ ಮೂಲಕ ಮತ ಪಡೆಯುವ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್, ಸೆಕ್ಟರ್ ಅಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರಾದ ವಿಜಯ್, ಅಧಿಕಾರಿಗಳು ಇದ್ದರು.









