ಮಡಿಕೇರಿ ಮೇ 1 : ಎಐಟಿಯುಸಿ ಸಂಘಟನೆ ವತಿಯಿಂದ ಬಿಳಿಗೇರಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.
ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಎಐಟಿಯುಸಿ ಸದಸ್ಯ ಲೋಕೇಶ್ ಮಾತನಾಡಿ, ಕಾರ್ಮಿಕ ಹಕ್ಕುಗಳ ಹೋರಾಟದ ನೆನಪಿಗಾಗಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕರ ರಕ್ಷಣೆಗಾಗಿ ಕಾರ್ಮಿಕರ ಕಾನೂನುಗಳನ್ನು ರಚಿಸಿದ್ದಾರೆ. ಹಕ್ಕುಗಳ ಪ್ರತಿಪಾದನೆಗಾಗಿ ಎಲ್ಲಾ ಕ್ಷೇತ್ರಗಳ ಕಾರ್ಮಿಕರು ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಕರೆ ನೀಡಿದರು.
ಪ್ರಮಾಣಿಕವಾಗಿ ಮಾಡುವ ಯಾವುದೇ ಕೆಲಸಕ್ಕೂ ಗೌರವವಿದೆ ಮತ್ತು ಅದನ್ನು ಗೌರವಿಸುವಂತಾಗಬೇಕು ಎಂದರು.
ಮತ್ತೋರ್ವ ಸದಸ್ಯ ಸಂಜೀವ ಮಾತನಾಡಿ, ಕಾರ್ಮಿಕರ ಹೋರಾಟದ ಮೇ ದಿನಕ್ಕೆ ತನ್ನದೇ ಆದ ಚಾರಿತ್ರಿಕ ಮಹತ್ವವಿದೆ. ಕಾರ್ಮಿಕರು ದುಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಕಾರ್ಮಿಕರ ಶಕ್ತಿ ಆಗಾದವಾದದ್ದು. ಮಾಲೀಕರು ಕೂಡ ಅವರ ದುಡಿಮೆಗೆ ತಕ್ಕ ಕೂಲಿ ಕೊಡಬೇಕಿದೆ. ಅಲ್ಲದೆ ಕಾರ್ಮಿಕರಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಲೀಕರು ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಸದಸ್ಯರಾದ ಸೂರ್ಯ, ಪ್ರಕಾಶ್, ಗಣೇಶ್, ರಮೇಶ್ ಹಾಗೂ ಮತ್ತಿತರರು ಹಾಜರಿದ್ದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*