ಮಡಿಕೇರಿ ಮೇ 2 : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಡೆಯಲಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ.
ಲೋಕಸಭಾ ಚುನಾವಣೆ-2019 ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಪತ್ರಿಕಾ ಛಾಯಾಗ್ರಾಹಕರು/ ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ ktkceomedia2023@gmail.com ಸಲ್ಲಿಸುವುದು. ಸಲ್ಲಿಕೆಗಳನ್ನು ಮೇ, 20 ರಂದು ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಬೇಕು.
ಪ್ರಥಮ ಬಹುಮಾನ್ 25 ಸಾವಿರ, ದ್ವಿತೀಯ ಬಹುಮಾನ 15 ಸಾವಿರ, ತೃತೀಯ ಬಹುಮಾನ 10 ಸಾವಿರ, ಸಮಾಧಾನಕರ ಬಹುಮಾನ ರೂ.6 ಸಾವಿರ ಹಾಗೂ ವಿಶೇಷ ಬಹುಮಾನ ರೂ.5 ಸಾವಿರ ನೀಡಲಾಗುತ್ತದೆ.
Breaking News
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*
- *ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
- *ನಕಲಿ ಪರಿಸರವಾದಿಗಳ ವಿರುದ್ಧ ಕ್ರಮಕ್ಕೆ ಸೇವ್ ಕೊಡಗು ಒತ್ತಾಯ*
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*