ಮಡಿಕೇರಿ ಮೇ 2 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೇ, 05 ರಂದು ಮಡಿಕೇರಿ ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ಜಾಥ ನಡೆಯಲಿದೆ ಎಂದು ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಮೇ, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ನಗರದ ಎ.ವಿ.ಶಾಲೆ ಬಳಿಯಿಂದ ಮತದಾನದ ಮಹತ್ವ ಸಾರುವ ಸಂದೇಶದೊಂದಿಗೆ ಜಾಥ ಆರಂಭವಾಗಲಿದೆ. ಮಡಿಕೇರಿ ಮಾರುಕಟ್ಟೆ, ಮಹದೇವಪೇಟೆಗಾಗಿ ಸಾಗಿ ಹಳೆ ಬಸ್ ನಿಲ್ದಾಣದಲ್ಲಿ ಜಾಥ ಸಮಾಪನಗೊಳ್ಳಲಿದೆ. ಈ ಜಾಥಾದಲ್ಲಿ ಎಲ್ಲಾ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಜಾಥವನ್ನು ಯಶಸ್ವಿಗೊಳಿಸುವಂತೆ ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಕೋರಿದ್ದಾರೆ.









