ಮಡಿಕೇರಿ ಮೇ 2 : ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿoದ ಗೆಲುವು ಸಾಧಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ವಿಧಾನ ಪರಿಷತ್ ನ ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕರೆ ನೀಡಿದ್ದಾರೆ.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮತ್ತು ವಲಯ ಮಟ್ಟದ ಚುನಾವಣಾ ಕಾರ್ಯಾಗಾರ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಹರಿಪ್ರಸಾದ್, ಬೂತ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿನ ರುವಾರಿಗಳಾಗಿದ್ದು, ಮೇ 10 ರವರೆಗೆ ನಿರಂತರ ಜನ ಸಂಪರ್ಕದಲ್ಲಿರುವoತೆ ಕಿವಿಮಾತು ಹೇಳಿದರು.
ವಿದ್ಯಾವಂತ ಹಾಗೂ ಪ್ರಜ್ಞಾವಂತ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಇವರುಗಳ ಗೆಲುವು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಕಾAಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ ಮಾತನಾಡಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.
ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಹೇಗೆ ನಡೆಸಬೇಕು ಎಂದು ವಿವರಿಸಿದರು.
ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ ಮಾತನಾಡಿ, ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸುವ ಕುರಿತು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಅವರ ಗೆಲುವಿಗೆ ಪಣ ತೊಡುವುದಾಗಿ ಭರವಸೆ ನೀಡಿದರು.
ಬ್ಲಾಕ್ ಮಟ್ಟದಲ್ಲಿ ಪ್ರಚಾರ ಕಾರ್ಯ ಯಶಸ್ವಿಯಾಗಿ ನಡೆಯುತ್ತಿರುವುದಾಗಿ ತಿಳಿಸಿದರು.
ಎಂಟು ವಲಯದ ಅಧ್ಯಕ್ಷರುಗಳು ಮಾತನಾಡಿ, ಕುಂದು ಕೊರತೆಗಳಿದ್ದಲ್ಲಿ ಸೂಕ್ತ ಸ್ಪಂದನೆ ನೀಡುವುದಾಗಿ ಭರವಸೆ ನೀಡಿದರು.
ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ರೋಶನ್ ಕೊಂಬಾರನ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ದೋಳ್‌ಪಾಡಿ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಸದಸ್ಯರಾದ ಪುಷ್ಪ ಪೂಣಚ್ಚ, ಟಿ.ಎಂ.ಅಯ್ಯಪ್ಪ, ಟಿ.ಪಿ.ನಾಣಯ್ಯ, ಉದಯ, ಬ್ಲಾಕ್ ಸಮಿತಿ ಸದಸ್ಯರಾದ ಪೂಣಚ್ಚ, ಸ್ವರ್ಣಲತ, ಅಫಿಸ್, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಸುದಯ್ ನಾಣಯ್ಯ, ಚಂದ್ರಶೇಖರ್, ನಗರಸಭಾ ಮಾಜಿ ಸದಸ್ಯ ಸುನಿಲ್ ನಂಜಪ್ಪ, ಕಾರ್ಯದರ್ಶಿ ಇಬ್ರಾಹಿಂ, ಸದಸ್ಯ ಹನೀಫ್, ಬ್ಲಾಕ್ ಖಜಾಂಚಿ ಬಲ್ಲಚಂಡ ಚಂದನ್, ನಗರ ಎಸ್.ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ಮಡಿಕೇರಿ ನಗರ ಮಹಿಳಾಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ, ಸೇವಾದಳದ ಪ್ರೇಮ, ಹಬೀಬ್, ಪ್ರಮುಖರಾದ ದಿವ್ಯ, ಪ್ರೇಮ, ಹಮೀದ್, ಅಜೀಝ್, ಬೂತ್ ಅಧ್ಯಕ್ಷ ಹುಸೇನ್ ಸೇರಿದಂತೆ ಕೊಡಗು ಕಾಂಗ್ರೆಸ್ ಹಾಗೂ ಮಡಿಕೇರಿ ಬ್ಲಾಕ್ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೊಡಗು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಸ್ವಾಗತಿಸಿದರು. ಬ್ಲಾಕ್ ಸಂಘಟನಾ ಕಾರ್ಯದರ್ಶಿ ಭಾರ್ಗವ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವುಫ್ ವಂದಿಸಿರು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*