ಮಡಿಕೇರಿ ಮೇ 2 : ಸಾರ್ವಜನಿಕರು ಪಾವತಿಸಿದ ತೆರಿಗೆ ಹಣ ಭ್ರಷ್ಟ ವ್ಯವಸ್ಥೆಯ ಪರಿಣಾಮ ಪೋಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಳ್ಳುತ್ತಿದೆ. ಇದೇ ಕಾರಣಕ್ಕೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕೆನ್ನುವ ಉದ್ದೇಶದಿಂದ ನಾನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮತದಾರರು ವಿಶ್ವಾಸವಿಟ್ಟು ಮತ ನೀಡುವ ಮೂಲಕ ಜನಸೇವೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಶ್ರೀಕೃಷ್ಣ ಗೋಶಾಲೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಗೆದ್ದು ಬಂದರೆ ಅಥವಾ ಸೋತರೂ ಕೊಡಗು ಜಿಲ್ಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳನ್ನು ರಚಿಸಲು ಹೋರಾಟ ಮಾಡುವುದಾಗಿ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಕೂಡ ಹಣವಿಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಮತ್ತು ಯಾವ ರೀತಿ ಅಭಿವೃದ್ಧಿ ಕಾರ್ಯ ಮಾಡಬಹುದು ಎನ್ನುವುದನ್ನು ಸಾಬೀತು ಪಡಿಸಲು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಜನಬೆಂಬಲ ಪ್ರಾಮಾಣಿಕರ ಪರ ಇರಲಿದೆ ಎನ್ನುವ ವಿಶ್ವಾಸವಿದೆ ಎಂದರು.
2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ ಸಲುವಾಗಿ ಶ್ರೀಕೃಷ್ಣ ಗೋಶಾಲೆಯನ್ನು ಸ್ಥಾಪಿಸಿದ್ದೇನೆ. ಆ ಮೂಲಕ ನೈಜ ಗೋಪ್ರೀತಿಯನ್ನು ತೋರಿಸಿದ್ದೇನೆ ಮತ್ತು ಗೋರಕ್ಷಣೆಗೆ ಆದ್ಯತೆ ನೀಡಿದ್ದೇನೆ. ಸಿನಿಮಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದು, ನನ್ನ ಬಹುತೇಕ ಸಮಯವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದೇನೆ. ಜನ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದರೆ ಮತದಾರರ ಬೇಡಿಕೆಗಳನ್ನು ಈಡೇರಿಸಲು ಸತತ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಕೋಟಿಗಟ್ಟಲೆ ಹಣ ಖರ್ಚು ಮಾಡಿ ನಿರ್ಮಿಸಿದ ರಸ್ತೆ, ಚರಂಡಿ, ತಡೆಗೋಡೆ, ಸೇತುವೆ, ಕಾಲುವೆಗಳು ಕಳಪೆ ಗುಣಮಟ್ಟದಿಂದ ಹದಗೆಡುತ್ತಿವೆ. ಭ್ರಷ್ಟಾಚಾರಕ್ಕಾಗಿ ಅವೈಜ್ಞಾನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ರೈತರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದ್ದು, ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ನೀರು ಮತ್ತು ಆಹಾರದ ಕೊರತೆಯಿಂದ ವನ್ಯಜೀವಿಗಳು ಬಳಲುತ್ತಿವೆ. ಆದರೂ ಕೆರೆಗಳ ಹೂಳೆತ್ತುವುದು ಹಾಗೂ ಆಹಾರ ಒದಗಿಸುವ ಕಾರ್ಯಕ್ಕೆ ಜನಪ್ರತಿನಿಧಿಗಳು ಮುಂದಾಗಿಲ್ಲ ಎಂದು ಆರೋಪಿಸಿದರು.
ಹಳ್ಳಿ ಹಳ್ಳಿಗೆ ಗುಣಮಟ್ಟದ ಸರ್ವಋತು ರಸ್ತೆಗಳು, ನೀರು, ಚರಂಡಿ, ವಿದ್ಯುಚ್ಛಕ್ತಿ, ಉತ್ತಮ ಶಾಲೆ, ಸರಕಾರಿ ಬಸ್ಸುಗಳ ವ್ಯವಸ್ಥೆ, ಎಲ್ಲಾ ಸೌಲಭ್ಯಗಳಿರುವ ಆಸ್ಪತ್ರೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ವಿಧಾನಸಭಾ ಕ್ಷೇತ್ರದ ಪ್ರತಿನಿಧಿಯಾಗಿ ಶ್ರಮಿಸಲಾಗುವುದು. ಸರ್ಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರನ್ನು ಖಾಯಂಗೊಳಿಸಲು ಹೋರಾಟ ಮಾಡಲಿದ್ದೇನೆ. ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಕಾಮಗಾರಿ ಭ್ರಷ್ಟಾಚಾರ ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳುತ್ತೇನೆ. ಕಮಿಷನ್ ಹಾವಳಿ ಇಲ್ಲದೆ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುವುದು, ಗೋಮಾಳಗಳ ಕಬಳಿಕೆಯನ್ನು ತಡೆದು ಸುಸಜ್ಜಿತ ಗೋಶಾಲೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದ ಎಷ್ಟೋ ಕುಟುಂಬಗಳಿಗೆ ಇನ್ನೂ ಸಮರ್ಪಕವಾಗಿ ಪರಿಹಾರ ದೊರೆತ್ತಿಲ್ಲ ಎಂದು ಆರೋಪಿಸಿದ ಹರೀಶ್ ಜಿ.ಆಚಾರ್ಯ, ಮತದಾರರು ನನ್ನನ್ನು ಬೆಂಬಲಿಸಿದರೆ ಎಲ್ಲಾ ಬೇಡಿಕೆಗಳಿಗೆ ಸಕಾಲದಲ್ಲಿ ಸ್ಪಂದಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಂಬಲಿಗರಾದ ಚೌರೀರ ರಮೇಶ್, ರವಿ ಗುರುಸ್ವಾಮಿ ಹಾಗೂ ರವಿ ಕೊಲ್ಯನ ಉಪಸ್ಥಿತರಿದ್ದರು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*