ಸೋಮವಾರಪೇಟೆ ಮೇ 2: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಬದಲಾಯಿಸಲು ಸಂಚು ರೂಪಿಸುವ ಕೋಮುವಾದಿ ಪಕ್ಷಗಳನ್ನು ತಿರಸ್ಕರಿಸುವಂತೆ ದಲಿತ ಸಂಘರ್ಷ ಸಮಿತಿಗಳ ಐಕ್ಯಹೋರಾಟ ಚಾಲನಾ ಸಮಿತಿಯ ಜಿಲ್ಲಾ ಘಟಕ ಮನವಿ ಮಾಡಿದೆ.
ರಾಜ್ಯದಲ್ಲಿ ಜಾತ್ಯಾತೀತ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂಬ ಸದುದ್ದೇಶದಿಂದ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತದ ಅಭ್ಯರ್ಥಿ ಡಾ.ಮಂಥರ್‌ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯವನ್ನು ಕಾಪಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಇಡೀ ದೇಶದ ಸರ್ಕಾರಿ ಸಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿದೆ. ದಲಿತ, ಹಿಂದುಳಿದ ವರ್ಗ, ಕಡು ಬಡವರು ಹಾಗೂ ಅಲ್ಪಸಂಖ್ಯಾತರಿಗಿದ್ದ ಮೀಸಲಾತಿಯನ್ನು ನಾಶ ಮಾಡುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಎಲ್ಲಾ ದಲಿತ ಸಂಘಟನೆಗಳನ್ನು ಒಟ್ಟಿಗೆ ಸೇರಿಸಿ ಕಟ್ಟಿರುವ ಐಕ್ಯ ಹೋರಾಟ ಸಮಿತಿ ಕೊಡಗು ಜಿಲ್ಲೆಯಲ್ಲಿ ಪ್ರತಿ ಪರಿಶಿಷ್ಟಜಾತಿ ಕಾಲೋನಿಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆ.ಎಲ್.ಜನಾರ್ಧನ್, ಪದಾಧಿಕಾರಿಗಳಾದ ಎಂ.ಎಸ್.ವಿರೇoದ್ರ, ಕೆ.ಎನ್.ಇಂದ್ರೇಶ್ ಹಾಗೂ ವಿ.ಸಂದೀಪ್ ಉಪಸ್ಥಿತರಿದ್ದರು.
Breaking News
- *ಗೋಣಿಕೊಪ್ಪ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟನೆ*
- *ಸೋಮವಾರಪೇಟೆ : ಒತ್ತುವರಿ ಜಮೀನುಗಳಿಗೆ ಹಕ್ಕುಪತ್ರ ನೀಡಲು ಆಗ್ರಹ*
- *ಅರೆ ಸೇನಾಪಡೆಯ ನಿವೃತ್ತ ಯೋಧರ ಸಮಸ್ಯೆಗಳಿಗೆ ಸ್ಪಂದನೆ ಅಗತ್ಯ : ಮಹಾಸಭೆಯಲ್ಲಿ ಒತ್ತಾಯ*
- *ಹೂಕಾಡು ಅಂಗನವಾಡಿಯಲ್ಲಿ ಬಾಲಮೇಳ*
- *ಡಿ.3 ರಂದು ವಿಶ್ವ ವಿಶೇಷಚೇತನರ ದಿನಾಚರಣೆ*
- *ಡಿ.2 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ*
- *ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ*
- *ಸಿದ್ದಾಪುರ : ಡಿ.23 ರಂದು ಅಂಚೆ ಅದಾಲತ್ ಸಭೆ*
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*