ಮಡಿಕೇರಿ ಮೇ 4 : ‘ಬೈನೋಬೈನ್ ಇಂಟರ್‌ನ್ಯಾಷನಲ್’ ವತಿಯಿಂದ ಇತ್ತೀಚೆಗೆ ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನಡೆದ 41ನೇ ರಾಷ್ಟ್ರಮಟ್ಟದ “ಬ್ರೈನೋಬೈನ್ ಸ್ಪರ್ಧೆ-2023”ರಲ್ಲಿ ಮಡಿಕೇರಿಯ ಬ್ರೈನೋಬೈನ್ ಕೇಂದ್ರದ ನುಷ್ಕ ಕೊಡೆಂದರ ಹಾಗೂ ತ್ರಿಶಾ ಎ.ವೈ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದಾರೆ.
ಬೈನೋಬೈನ್ ಇಂಟರ್ ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಮ್ ಹಾಗೂ ತಾಂತ್ರಿಕ ನಿರ್ದೇಶಕ ಸುಬ್ರಮಣ್ಯಮ್ ಅವರು ವಿಜೇತರಿಗೆ ಪದಕ ಪ್ರದಾನ ಮಾಡಿದರು.
ಬೈನೋಬ್ರೆನ್ ಮಡಿಕೇರಿ ಕೇಂದ್ರದ ಮುಖ್ಯಸ್ಥರು ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರಿಂದ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಚಿನ್ನದ ಪದಕ ಗೆದ್ದಿರುವ ವಿದ್ಯಾರ್ಥಿಗಳ ಸಾಧನೆ ಅಮೋಘ ಎಂದು ಹರ್ಷ ವ್ಯಕ್ತಪಡಿಸಿರುವ ಕವಿತಾ ಕರುಂಬಯ್ಯ, ಇದರ ಹೆಗ್ಗಳಿಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.
5 ವರ್ಷದ ನುಷ್ಕ ಕೊಡೆಂದೆರ ಮಡಿಕೇರಿಯ ಕೊಡೆಂದರೆ ವಿಕ್ರಮ್ ಕುಟ್ಟಯ್ಯ ಹಾಗೂ ಕಾವ್ಯ ದಂಪತಿ ಪುತ್ರಿಯಾಗಿದ್ದು, ಟೀಟೋಸ್ ಪ್ಲೇ ಸ್ಕೂಲ್ ನಲ್ಲಿ ಯು.ಕೆ.ಜಿ ಮುಗಿಸಿದ್ದಾಳೆ.
ತ್ರಿಶಾ ಎ.ವೈ ಮಡಿಕೇರಿಯ ಸಿಐಡಿ ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಗೇಶ್ ಎ.ಜಿ ಹಾಗೂ ಭವಿತ ಕೆ.ಜಿ ದಂಪತಿ ಪುತ್ರಿಯಾಗಿದ್ದು, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನಲ್ಲಿ 6ನೇ ತರಗತಿ ವ್ಯಾಸಂಗ ಮುಗಿಸಿದ್ದಾಳೆ.
ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ಒಟ್ಟು 3 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*